ಪಕ್ಷ ವಿರೋಧಿ ಚಟುವಟಿಕೆ ಆರೋಪ: ಹಲವು ಮಂದಿ ಉಚ್ಚಾಟನೆ

Update: 2023-05-16 16:41 GMT

ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಆರೋಪದಲ್ಲಿ ಹಲವರನ್ನು ಬ್ಲಾಕ್ ಅಧ್ಯಕ್ಷರು ಉಚ್ಚಾಟಿಸಿ ಆದೇಶಿಸಿದ್ದಾರೆ.

ಗುರುಪುರ ಬ್ಲಾಕ್ ಕಾಂಗ್ರೆಸ್ ನಿಂದ ಗುರುಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷರಾಗಿದ್ದ ಗ್ರಾಮ ಪಂಚಾಯತ್ ಸದಸ್ಯ ದಾವೂದು ಬಂಗ್ಲೆಗುಡ್ಡೆ, ಮುಹಮ್ಮದ್ ಝಹೂರ್‌ ಗಂಜಿಮಠ, ಇರ್ಫಾನ್ ಆ‌ರ್. ಎಸ್‌., ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈ ಬಾನು, ಬ್ಲಾಕ್ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮುಹಮ್ಮದ್ ಮುಫೀದ್, ಅಲ್ಪ ಸಂಖ್ಯಾತ ಘಟಕದ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತನ್ವೀರ್ ಅವರನ್ನು ಉಚ್ಚಾಟಿಸಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ ಅವರು ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಕಾಂಗ್ರೆಸ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿ ಆಸಿಫ್ ಚೊಕ್ಕಬೆಟ್ಟು, ಬ್ಲಾಕ್ ಕಾಂಗ್ರೆಸ್ ಸದಸ್ಯೆ ಶಂಶಾದ್ ಕುಜತ್ತಬೈಲ್, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಇಮ್ರಾನ್ ಚೊಕ್ಕಬೆಟ್ಟು, 27ನೇ ಬೂತ್ ಅಧ್ಯಕ್ಷ ನಿಯಾಝ್ ಕಾಟಿಪಳ್ಳ ಅವರನ್ನು ಉಚ್ಚಾಟಿಸಿ ಸುರತ್ಕಲ್ ಬ್ಲಾಕ್ ಅಧ್ಯಕ್ಷ ಉಮೇಶ್ ದಂಡಕೇರಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

Similar News