7ನೇ ರಾಜ್ಯ ವೇತನ ಆಯೋಗದ ವರದಿ ಸಲ್ಲಿಕೆ ಕಾಲಾವಧಿ ವಿಸ್ತರಣೆ
Update: 2023-05-16 22:49 IST
ಬೆಂಗಳೂರು, ಮೇ 16: ಕರ್ನಾಟಕ 7ನೆ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ 7ನೆ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2023ರ ಮೇ 19ರಿಂದ 6 ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಉಮಾ ಕೆ. ತಿಳಿಸಿದ್ದಾರೆ.