ಮೇ 17ರಂದು ವಿಧಾನ ಪರಿಷತ್ತಿನ ಇಬ್ಬರು ಸದಸ್ಯರು ನಿವೃತ್ತಿ
Update: 2023-05-16 22:59 IST
ಬೆಂಗಳೂರು, ಮೇ 16: ವಿಧಾನ ಪರಿಷತ್ತಿನ ನಾಮ ನಿರ್ದೇಶಿತ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಪಿ.ಆರ್.ರಮೇಶ್ ಇಂದು(ಮೇ 17) ನಿವೃತ್ತರಾಗಲಿದ್ದಾರೆ.
ವಿಧಾನ ಪರಿಷತ್ತಿನ ಅವರ ಸದಸ್ಯತ್ವ ಅವದಿ ಇಂದಿಗೆ ಪೂರ್ಣಗೊಳ್ಳಲಿದೆ. ಇನ್ನೂ, ಮತ್ತೊಬ್ಬ ನಾಮ ನಿರ್ದೇಶಿತ ಸದಸ್ಯರಾದ ಸಿ.ಎಂ.ಲಿಂಗಪ್ಪ ಅವರು ಜೂನ್ ರಂದು ನಿವೃತ್ತರಾಗಲಿದ್ದಾರೆ. ಸದ್ಯ ಕಾಂಗ್ರೆಸ್ಸಿನ ನೂತನ ಸರಕಾರ ಎರಡು ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡಬಹುದಾಗಿದೆ.
ಮತ್ತೊಂದೆಡೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿಲು ಸದಸ್ಯರ ನೀಡಿದ್ದ ರಾಜೀನಾಮೆಯಿಂದ ವಿಧಾನ ಪರಿಷತ್ತಿನ ಐದು ಸ್ಥಾನಗಳು ಖಾಲಿ ಇದ್ದು, ಆ ಸ್ಥಾನಗಳಿಗೂ ಉಪ ಚುನಾವಣೆ ಘೋಷಣೆ ನಡೆಯಬೇಕಿದೆ. ಹೀಗಾಗಿ ಒಂದು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಂದ ಚುನಾಯಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಗಳು ಖಾಲಿ ಇವೆ.