2023-24ನೇ ಸಾಲಿನ ಡಿಪ್ಲೋಮಾ ಪ್ರಿಂಟಿಂಗ್ ಟೆಕ್ನಾಲಜಿ ಕೋರ್ಸ್‍ನ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 16: ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಂದ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರಿಂಟಿಂಗ್ ಟೆಕ್ನಾಲಜಿ ಕೋರ್ಸ್‍ನ ಪ್ರವೇಶ ಪಡೆಯಲು ಸರಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮೂಲ ದಾಖಲಾತಿಗಳೊಂದಿಗೆ ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಸಂಸ್ಥೆಯ ಪಾಲಿಟೆಕ್ನಿಕ್‍ನಲ್ಲಿ ಮೊದಲು ಬಂದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅತೀ ಕಡಿಮೆ ಪ್ರವೇಶ ಶುಲ್ಕ ಹಾಗೂ ವಿವಿಧ ವಿದ್ಯಾರ್ಥಿ ವೇತನಗಳನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.
ಕೈಗಾರಿಕಾ ತಜ್ಞರು ಹಾಗೂ ಪರಿಣಿತ ಹಳೆಯ ವಿದ್ಯಾರ್ಥಿಗಳಿಂದಲೇ ತಯಾರಾದ ಮತ್ತು ವಿದೇಶಿ ಪಠ್ಯಕ್ರಮಗಳಿಗೆ ಸಮನಾದ ಹೊಸ ಸಿ-20 ಪಠ್ಯಕ್ರಮ. ಪಾಲಿಟೆಕ್ನಿಕ್‍ನಲ್ಲಿ ನುರಿತ ಅನುಭವಿ ಉಪನ್ಯಾಸಕರು, ಸುಸಜ್ಜಿತ ಪ್ರಯೋಗಾಲಯಗಳು, ಅತ್ಯುತ್ತಮ ಗ್ರಂಥಾಲಯ ಹಾಗೂ ಉದ್ಯೋಗ ಸಂಬಂಧಿತ ಘಟಕ ಹೊಂದಿರುತ್ತೇವೆ. ಡಿಜಿಟಲ್ ಕಲಿಕೆಗಾಗಿ ಸ್ಮಾರ್ಟ್‍ಕ್ಲಾಸ್ ರೂಮ್‍ಗಳು ಹಾಗೂ ಉಚಿತ ಟಾಬ್‍ಲೆಟ್ ಪಿಸಿಗಳನ್ನು ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಕೈಗಾರಿಕೆಗಳಲ್ಲಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಗೆ ಸದಾವಕಾಶ ಕಲ್ಪಿಸಲಾಗುವುದು. ವಿವಿಧ ದೇಶ ಹಾಗೂ ವಿದೇಶದ ಕಂಪೆನಿಗಳೊಂದಿಗೆ ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಡಿಪ್ಲೋಮಾ ನಂತರ ಎರಡನೇ ವರ್ಷದ ಇಂಜಿನಿಯರಿಂಗ್ ಪದವಿಗೆ ನೇರ ಪ್ರವೇಶ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9448315326ಗೆ ಸಂಪರ್ಕಿಸಲು ತಿಳಿಸಲಾಗಿದೆ.