×
Ad

ಉಕ್ರೇನ್ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಬಂಧನ

Update: 2023-05-16 23:25 IST

ಕೀವ್, ಮೇ 16: ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಕ್ರೇನ್ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಾಧೀಶರನ್ನು ಕಾನೂನು ಜಾರಿ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.

2.7 ದಶಲಕ್ಷ ಡಾಲರ್ ಮೊತ್ತದ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ವೆಸೆಲೊದ್‍ನಿಯಾಝಿಯೆವ್‍ರನ್ನು ಬಂಧಿಸಲಾಗಿದೆ ಎಂದು ಉಕ್ರೇನ್‍ನ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಅಧಿಕಾರಿ ಒಲೆಕ್ಸಾಂಡರ್ ಕ್ಲಿಮೆಂಕೊ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಸುಪ್ರೀಂಕೋರ್ಟ್‍ನಲ್ಲಿ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಿಯಾಝಿಯೆವ್‍ರನ್ನು 2017ರಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿತ್ತು. ಅವರು 2.7 ದಶಲಕ್ಷ ಡಾಲರ್ ಲಂಚ ಸ್ವೀಕರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎಂದು ವರದಿಯಾಗಿದೆ.

Similar News