×
Ad

ರಾಜ್ಯ ಸೇವೆಯಿಂದ ಇಬ್ಬರು ಐಎಎಸ್ ಅಧಿಕಾರಿಗಳ ಬಿಡುಗಡೆ

Update: 2023-05-16 23:57 IST

ಬೆಂಗಳೂರು, ಮೇ 16: ಐಎಎಸ್ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಗಾದಿ ಗೌತಮ್ ಹಾಗೂ ಪಶುಸಂಗೊಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಆಯುಕ್ತೆ ಅಶ್ವಥಿ ಎಸ್. ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆ ತಿಳಿಸಿದೆ.

ಉತ್ತರಾಖಂಡದ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ(ಎಲ್‍ಬಿಎನ್‍ಎಎ)ಯ ಹಿರಿಯ ಉಪ ನಿರ್ದೇಶಕರನ್ನಾಗಿ ಡಾ.ಬಗಾದಿ ಗೌತಮ್ ಅವರನ್ನು ಹಾಗೂ ಅಶ್ವಥಿ ಎಸ್. ಅವರನ್ನು ಉಪ ನಿರ್ದೇಶಕರನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Similar News