×
Ad

ಪಶ್ಚಿಮ ಬಂಗಾಳ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ಮೃತ್ಯು

Update: 2023-05-17 10:44 IST

ಕೋಲ್ಕತಾ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಬ್ಲಾಕ್‌ನಲ್ಲಿರುವ ಅಕ್ರಮ ಪಟಾಕಿ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಹಾಗೂ  ಇಬ್ಬರು ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಬೆಳಗ್ಗೆ 11.35ಕ್ಕೆ ಸಂಭವಿಸಿದ ಸ್ಫೋಟದ ಪರಿಣಾಮ ಕಾರ್ಖಾನೆ ಕುಸಿದುಬಿದ್ದಿದೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪಶ್ಚಿಮ ಬಂಗಾಳ-ಒಡಿಶಾ ಗಡಿಯಲ್ಲಿರುವ ಖಾಡಿಕುಲ್ ಗ್ರಾಮದಲ್ಲಿ ಕೃಷ್ಣಪಾದ ಬಾಗ್ ಅಲಿಯಾಸ್ ಭಾನು ಬಾಗ್ ಎಂಬ ವ್ಯಕ್ತಿಯ ಮನೆಯಲ್ಲಿ  ಪಟಾಕಿ ಕಾರ್ಖಾನಗೆ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ.

ಅಕ್ರಮ ಪಟಾಕಿ ಕಾರ್ಖಾನೆಯ ಮೇಲೆ ಕಳೆದ ತಿಂಗಳು ದಾಳಿ ನಡೆಸಲಾಗಿದ್ದು, ಅದನ್ನು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಕಾರಣ ಏನು ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗುತ್ತದೆ.  ಎಂದು ಪುರ್ಬಾ ಮೇದಿನಿಪುರ ಪೊಲೀಸ್ ವರಿಷ್ಠಾಧಿಕಾರಿ ಕೆ ಅಮರನಾಥ್ ತಿಳಿಸಿದ್ದಾರೆ.

Similar News