ಸಿಎಂ ಆಯ್ಕೆಗೆ ಅಂತಿಮ ಕಸರತ್ತು | ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿ.ಕೆ ಶಿವಕುಮಾರ್
Update: 2023-05-17 14:12 IST
ಹೊಸದಿಲ್ಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆ ಸಾಧ್ಯತೆ ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಸಿದೆ.
ಈಗಾಗಲೇ ಇಬ್ಬರೂ ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಭೇಟಿ ಬಳಿಕ ಡಿ.ಕೆ ಶಿವಕುಮಾರ್ ಖರ್ಗೆ ಅವರ ನಿವಾಸಕ್ಕೆ ತೆರಳಿ ಮಾತು ಕತೆ ನಡೆಸುತ್ತಿದ್ದಾರೆ.
ಮಂಗಳವಾರವಷ್ಟೇ ಖರ್ಗೆ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದರು.