×
Ad

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ, ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ: ಸುರ್ಜೇವಾಲಾ

''ಇಂದು ಸಂಜೆ ಅಥವಾ ನಾಳೆ ನೂತನ ಸಿಎಂ ಘೋಷಣೆ ಮಾಡ್ತೇವೆ''

Update: 2023-05-17 15:17 IST

ಹೊಸದಿಲ್ಲಿ: 'ಕರ್ನಾಟಕ ಕಾಂಗ್ರೆಸ್ ನ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. 

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು. 

ಇಂದು ಸಂಜೆ ಅಥವಾ ನಾಳೆ ನೂತನ ಸಿಎಂ ಘೋಷಣೆ ಮಾಡುತ್ತೇವೆ ಎಂದು ಇದೇ ವೇಳೆ ಮಾಹಿತಿ ನೀಡಿದರು. 

Similar News