×
Ad

ಕಟೀಲು: ಹೊತ್ತಿ ಉರಿದ ಖಾಸಗಿ ಬಸ್

Update: 2023-05-17 16:20 IST

ಕಟೀಲು: ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಸಂಸ್ಥೆಯ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಹೊತ್ತಿ ಉರಿದಿದೆ.

ಕಟೀಲು ರೂಟ್ ನಲ್ಲಿ ಚಲಿಸುವ ಬಸ್ ಕಟೀಲು ಕಡೆಯ ನೌಕರನನ್ನು ಬಿಟ್ಟು ವಾಪಾಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದರು ಎನ್ನಲಾಗಿದೆ. 

ಎಲ್ಲರೂ ಅಪಾಯದಿಂದ ಪಾರಾಗಿದ್ದು, ಶಾರ್ಟ್‌ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದೆ. ಬಸ್ ಸಂಪೂರ್ಣ ಭಸ್ಮವಾಗಿದ್ದು, ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ನೀರಿನ ಟ್ಯಾಂಕರ್ ನಿಂದ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.

Full View

Similar News