ಸಿದ್ದರಾಮಯ್ಯ, ಡಿಕೆಶಿ ನಡುವೆ ಅಧಿಕಾರ ಹಂಚಿಕೆಯ ಪ್ರಸ್ತಾಪ ಕೇವಲ ಗಾಳಿ ಸುದ್ದಿ: ಡಾ.ಎಚ್.ಸಿ. ಮಹದೇವಪ್ಪ
ಬೆಂಗಳೂರು, ಮೇ 17: ‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಎರಡು ಮತ್ತು ಮೂರು ವರ್ಷಗಳ ಅಧಿಕಾರ ಹಂಚಿಕೆಯ ಪ್ರಸ್ತಾಪ ಕೇವಲ ಗಾಳಿ ಸುದ್ದಿ’ ಎಂದು ಶಾಸಕ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಸಿಎಂ ಆಗಲು ಸಜ್ಜಾಗಿರುವುದು ಸಂತಸ ತಂದಿದೆ. ಆದರೆ, ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ. ಸಿಎಂ ಸ್ಥಾನಕ್ಕೆ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದು, ಒಬ್ಬರನ್ನು ಮಾತ್ರ ಮುಖ್ಯಮಂತ್ರಿ ಮಾಡಬಹುದು. ಹೀಗಾಗಿ, ಎಲ್ಲ ಅಂಶಗಳನ್ನು ವಿಶ್ಲೇಷಿಸಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ’ಎಂದು ಹೇಳಿದರು.
‘ಸದ್ಯದ ರಾಜಕೀಯ ಸನ್ನಿವೇಶವನ್ನು ಕೂಲಂಕಷವಾಗಿ ವಿಶ್ಲೇಷಿಸಿದ ನಂತರ ಸಿದ್ದರಾಮಯ್ಯರನ್ನು ಆಯ್ಕೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಆಕಾಂಕ್ಷೆಯನ್ನು ಹೊಂದಿರುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಪ್ರಾಮಾಣಿಕರಿದ್ದು, ಕಾಂಗ್ರೆಸ್ ಪಕ್ಷವನ್ನು ನಂಬಲು ಜನರಿಗೆ ಸಹಾಯ ಮಾಡಿದೆ' ಎಂದು ಮಹದೇವಪ್ಪ ತಿಳಿಸಿದರು.