ಸಿದ್ದರಾಮಯ್ಯ ವಿರುದ್ಧದ ಸುಧಾಕರ್ ಆರೋಪಗಳು ಸತ್ಯಕ್ಕೆ ದೂರ: ಎಂ.ಟಿ.ಬಿ.ನಾಗರಾಜ್
''ಚುನಾವಣೆಯಲ್ಲಿ ಸೋತ ನಂತರ ಸುಧಾಕರ್ ಭ್ರಮನಿರಸನರಾಗಿದ್ದಾರೆ''
ಬೆಂಗಳೂರು, ಮೇ 17: ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ ? ಇಷ್ಟು ದಿನ ಮೌನವಾಗಿದ್ದು ಏಕೆ? ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಪ್ರಶ್ನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ಸುಧಾಕರ್ ರವರು ಇಂದು ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಎಂದು ಕೇಳಿದ್ದಾರೆ.
ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ ಎಂದು ನಾಗರಾಜ್ ಹೇಳಿದ್ದಾರೆ.
ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?
— MTB Nagaraj (@MTB_Nagaraj) May 17, 2023