×
Ad

​ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳಿಗೆ ಸನ್ಮಾನ

Update: 2023-05-17 20:42 IST

ಉಡುಪಿ, ಮೇ 17: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ರಾಜ್ಯ ಶಾಖೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಕನಿಷ್ಠ 25ಕ್ಕಿಂತ ಮೇಲ್ಪಟ್ಟು ಹಾಗೂ ಜಿಲ್ಲಾ ಘಟಕದಿಂದ ಕನಿಷ್ಠ 15 ಬಾರಿ ಮೇಲ್ಪಟ್ಟು ರಕ್ತದಾನ ಮಾಡಿರುವ ದಾನಿಗಳನ್ನು ಗುರುತಿಸಿ, ಸನ್ಮಾನಿಸಲಾಗುವುದು. 

ಆದ್ದರಿಂದ ರಕ್ತದಾನಿಗಳು ರಕ್ತದಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆಯ ಪ್ರತಿ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳ ವಿವರವನ್ನು ಮೇ 24ರೊಳಗೆ ಗೌರವ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸಬಹುದು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News