ವಿಟ್ಲ: ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಆರೋಪಿ ಸೆರೆ

Update: 2023-05-17 15:18 GMT

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 13 ರಂದು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ  ಬಂದ ಅಪರಿಚಿತ ವ್ಯಕ್ತಿ ದ್ವಿಚಕ್ರ ವಾಹನ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿಟ್ಲ ಎಸೈ ಕಾರ್ತಿಕ್ ಕಾತರಕಿ ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.

Similar News