ಜಾತಿಗಣತಿ: ಬಿಹಾರದ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ
Update: 2023-05-17 21:10 IST
ಹೊಸದಿಲ್ಲಿ,ಮೇ 17: ರಾಜ್ಯದಲ್ಲಿ ಜಾತಿಯಾಧಾರಿತ ಗಣತಿಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿರುವ ಪಾಟ್ನಾ ಉಚ್ಚ ನ್ಯಾಯಾಲಯದ ಮೇ 4ರ ಆದೇಶವನ್ನು ಪ್ರಶ್ನಿಸಿ ಬಿಹಾರ ಸರಕಾರವು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಸಂಜಯ ಕರೋಲ್ ಅವರು ಬುಧವಾರ ಹಿಂದೆ ಸರಿದಿದ್ದಾರೆ.
ಅರ್ಜಿಯನ್ನು ವಿಚಾರಣೆಗಾಗಿ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂಜಯ ಕರೋಲ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿತ್ತು.
ಬಿಹಾರ ಸರಕಾರವು ತುರ್ತು ವಿಚಾರಣೆಯನ್ನು ಕೋರಿ ಅರ್ಜಿಯನ್ನು ಗುರುವಾರ ಸರ್ವೋಚ್ಚ ನ್ಯಾಯಾಲಯದ ಮುಂದೆ ಉಲ್ಲೇಖಿಸಲಿದೆ ಎಂದು ವಕೀಲ ಮನೀಷ್ ಸಿಂಗ್ ತಿಳಿಸಿದರು.