×
Ad

ಸಿಎಂ ಆಯ್ಕೆ ಕಗ್ಗಂಟು | ಸಿದ್ದರಾಮಯ್ಯ ಬೆನ್ನಲ್ಲೇ ಕೆ.ಸಿ.ವೇಣುಗೋಪಾಲ್ ​ರನ್ನು ಭೇಟಿಯಾದ ಡಿಕೆಶಿ

Update: 2023-05-17 23:58 IST

ಹೊಸದಿಲ್ಲಿ: ಕರ್ನಾಟಕ ಕಾಂಗ್ರೆಸ್ ನ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಪಟ್ಟು ಸಡಿಲಿಸದ ಕಾರಣ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಕೆ ಕಾಂಗ್ರೆಸ್‌ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ನಡುವೆ ಬುಧವಾರ ರಾತ್ರಿ ಸಿದ್ದರಾಮಯ್ಯ ಅವರು ತಾವು ತಂಗಿದ್ದ ಹೋಟೆಲ್​​ನಿಂದ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ ತೆರಳಿದ್ದಾರೆ. 

ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ಕೂಡ ಕೆ.ಸಿ ವೇಣುಗೋಪಾಲ್ ​ಅವರನ್ನು ಭೇಟಿ ಮಾಡಿ ಮಾತುಕತೆ ಚರ್ಚೆ ಮಾಡಿದ್ದಾರೆ.

ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್  ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಿವಾಸಕ್ಕೆ ಶಾಸಕರಾದ ರಾಘವೇಂದ್ರ ಹಿಟ್ನಾಳ್, ವಿನಯ್ ಕುಲಕರ್ಣಿ ಜೊತೆ ತೆರಳಿ ಚರ್ಚೆ ನಡೆಸಿದ್ದರು ಎಂದು ವರದಿಯಾಗಿದೆ. 

ಉಭಯ ನಾಯಕರ ಜತೆ ಹೈಕಮಾಂಡ್ ಸಭೆ ನಡೆಸಿ, ನಾಳೆ ಸಂಜೆಯೊಳಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Similar News