×
Ad

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ 91ನೇ ಜನ್ಮದಿನ: ಪ್ರಧಾನಿ ಮೋದಿ, ಎಚ್ ಡಿಕೆ ಸೇರಿ ಗಣ್ಯರ ಶುಭಾಶಯ

Update: 2023-05-18 10:55 IST

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. 

''ದೇವೇಗೌಡರು ನಮ್ಮ ದೇಶಕ್ಕೆ ಅವರ ಕೊಡುಗೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ'' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. 

ಮಾಜಿ ಮುಖ್ಯಮಂತ್ರಿ, ದೇವೇಗೌಡ ಅವರ ಪುತ್ರ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ,  ''ಭಾರತದ 11ನೇ ಪ್ರಧಾನಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು''

''ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜೆಡಿಎಸ್ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ. 

''ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ''

ಬಸವರಾಜ ಬೊಮ್ಮಾಯಿ- ಹಂಗಾಮಿ ಮುಖ್ಯಮಂತ್ರಿ

Similar News