×
Ad

ಖರ್ಗೆ ನಿವಾಸಕ್ಕೆ ಒಂದೇ ಕಾರಿನಲ್ಲಿ ಆಗಮಿಸಿದ ಡಿಕೆಶಿ, ಸಿದ್ದರಾಮಯ್ಯ

Update: 2023-05-18 11:19 IST

ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕೊನೆಗೂ ಬಗೆಹರಿದಿದೆ. ಈ ಬಗ್ಗೆ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.

ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಹಲವು ಬಾರಿ ಮಾತುಕತೆ ನಡೆಸಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. 

ಇಂದು ಬೆಳಗ್ಗೆ ವೇಣುಗೋಪಾಲ್ ಅವರ ನಿವಾಸದಲ್ಲಿ ಉಪಹಾರ ಮುಗಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಆಗಮಿಸಿದ್ದಾರೆ. 

Similar News