×
Ad

ತೀರ್ಥಹಳ್ಳಿ: ಇಬ್ಬರು ಕಾರ್ಮಿಕರ ಬರ್ಬರ ಹತ್ಯೆ

Update: 2023-05-18 11:35 IST

ಶಿವಮೊಗ್ಗ, ಮೇ 18: ಕೂಲಿ ಕಾರ್ಮಿಕರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ವಿಶ್ವಕರ್ಮ ಸಮುದಾಯ ಭವನದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಮೃತರನ್ನು ದಾವಣಗೆರೆ ಮೂಲದ ಮಂಜಪ್ಪ ಮತ್ತು ಬೀರಪ್ಪ ಎಂದು ಗುರುತಿಸಲಾಗಿದೆ. ಇವರಿಬ್ಬರ ತಲೆ ಮೇಲೆ ಕಲ್ಲುಗಳನ್ನು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತರು ಇಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬಂದಿದ್ದ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ರಾಜಣ್ಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆರಳಚ್ಚು, ಶ್ವಾನದಳವನ್ನು ಸ್ಥಳಕ್ಕೆ ಕರೆಸಲಾಗಿದೆ.  ಹತ್ಯೆಗೆ ನಿಖರ ಕಾರಣ ಇನ್ನಷ್ಟೆ ಗೊತ್ತಾಗಬೇಕಿದೆ. ಸದ್ಯದಲ್ಲೇ ಸಮುದಾಯ ಭವನ ಉದ್ಘಾಟನೆ ಆಗುವುದರಲ್ಲಿತ್ತು.

Similar News