×
Ad

ನಾವು ಒಗ್ಗಟ್ಟಾಗಿದ್ದೇವೆ: ಸಿದ್ದರಾಮಯ್ಯ ಜತೆಗಿನ ಫೋಟೊ ಹಂಚಿಕೊಂಡ ಡಿ.ಕೆ ಶಿವಕುಮಾರ್

Update: 2023-05-18 13:27 IST

ಹೊಸದಿಲ್ಲಿ: 'ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ನಮ್ಮ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ, ಮತ್ತು ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೆಳಿದ್ದಾರೆ.

ಕರ್ನಾಟಕದ ಏಕೈಕ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಮಾಡಿದ ಮೊದಲ ಟ್ವೀಟ್ ನಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಈ ಸಂದೇಶವನ್ನು ನೀಡಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿ.ಕೆ ಶಿವಕುಮಾರ್ ಪ್ರತಿಸ್ಪರ್ಧಿ ವಿರುದ್ಧ 1 ಲಕ್ಷ 22 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. 2008ರಿಂದ ಈವರೆಗೆ ಕನಕಪುರದಲ್ಲಿ ಅವರನ್ನು ಮಣಿಸಲು ಯಾರಿಗೂ ಸಾಧ್ಯವಾಗಿಲ್ಲ.

ಡಿ.ಕೆ ಶಿವಕುಮಾರ್ ಕನಕಪುರ ತಾಲೂಕು ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರ. ಸಹೋದರ ಡಿ. ಕೆ. ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ.

Similar News