×
Ad

ಪಕ್ಷ ಸೋತಾಗ ಕಾರ್ಯಕರ್ತನಿಗೆ ನಾಯಕರ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕಿದೆ: ಪ್ರತಾಪ್ ಸಿಂಹ

Update: 2023-05-18 13:28 IST

ಬೆಂಗಳೂರು, ಮೇ 18: "ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ" ಎಂದು ಮೈಸೂರು-ಕೊಡುಗ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಪುತ್ತೂರಿನಲ್ಲಿ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರಿಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾಕಿದ ಆರೋಪದಲ್ಲಿ ಬಂಧಿತ 9 ಮಂದಿಯ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ಕೇಳಿಬಂದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, "ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ" ಎಂದು ಕಿವಿಮಾತು ಹೇಳಿದ್ದಾರೆ.

Similar News