ಉಚಿತವಾಗಿ ಪ್ರಯಾಣಿಸುವ ಮಹಿಳೆಗೆ ಬಸ್ ನಿಲ್ಲಿಸದ ಚಾಲಕ: ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಕೇಜ್ರಿವಾಲ್

Update: 2023-05-18 09:41 GMT

ಹೊಸದಿಲ್ಲಿ: ಮಹಿಳೆಯೊಬ್ಬರಿಗೆ ಬಸ್ ನಿಲ್ಲಿಸದ ಡಿಟಿಸಿ ಬಸ್‌  ಚಾಲಕರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ದಿಲ್ಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ  ಕೇಜ್ರಿವಾಲ್ ಗುರುವಾರ ಎಚ್ಚರಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಇಂತಹ ಘಟನೆಯ ವಿಡಿಯೋವನ್ನು ಪೋಸ್ಟ್ ಮಾಡಿದ ಕೇಜ್ರಿವಾಲ್, ಬಸ್ ಚಾಲಕನಿಗೆ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.

AAP ಸರ್ಕಾರವು 2019 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಆರಂಭಿಸಿತು. ಅಂದಿನಿಂದ, ಅವರು ಈ ಸೌಲಭ್ಯವನ್ನು ಪಡೆದ ಮಹಿಳೆಯರ ಸಂಖ್ಯೆಯ ಕುರಿತು ಬಜೆಟ್‌ನಲ್ಲಿ ಪ್ರತಿ ವರ್ಷ ಸ್ಥಿತಿಗತಿ ವರದಿಯನ್ನು ಮಂಡಿಸುತ್ತಾರೆ.

"ಮಹಿಳೆಯರಿಗೆ ಉಚಿತ ಪ್ರಯಾಣದ ಕಾರಣ ಕೆಲವು ಚಾಲಕರು ಮಹಿಳೆಯರನ್ನು ನೋಡಿ ಬಸ್ ನಿಲ್ಲಿಸುವುದಿಲ್ಲ ಎಂಬ ದೂರುಗಳಿವೆ. ಇದನ್ನು ಸಹಿಸಲಾಗುವುದಿಲ್ಲ. ಈ ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ" ಎಂದು ಕೇಜ್ರಿವಾಲ್ ಅವರು ತಮ್ಮ ಟ್ವೀಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Similar News