×
Ad

ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯಲ್ಲ, ಆದರೆ... : ಸತೀಶ್ ಜಾರಕಿಹೊಳಿ ಬೇಡಿಕೆ ಏನು?

Update: 2023-05-18 15:21 IST

ಬೆಂಗಳೂರು: 'ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ಬೇರೆ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಿದರೆ ನಾನು ಸಹ ಬೇಡಿಕೆ ಇಡುತ್ತೇನೆ. ಬೇರೆಯವರು ಕೇಳಿದರೆ ನಾನು ಸಹ ಎಸ್ಟಿ ಸಮುದಾಯದಿಂದ ನನಗೆ ಡಿಸಿಎಂ ಸ್ಥಾನ ಕೊಡಿ ಎಂದು ಕೇಳುತ್ತೇನೆ. ಆದರೆ  ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದೇನೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಒಳ್ಳೆಯ ತೀರ್ಮಾನ ಕೈಗೊಂಡಿದ್ದಾರೆ. ಸಿದ್ದರಾಮಯ್ಯ  ಅವರು ಮುಖ್ಯಮಂತ್ರಿ ಆಗಿ ಉತ್ತಮ ಕಾರ್ಯ ಮಾಡಲಿದ್ದಾರೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಹಾಕಲಿದ್ದು, ಬಡವರಿಗೆ ಯಾವುದೇ ಮಾನದಂಡ ಅನ್ವಯಿಸುವುದಿಲ್ಲ. ಆದರೆ ಶ್ರೀಮಂತರಿಗೆ ಮಾನದಂಡ ಹಾಕುತ್ತೇವೆ ಎಂದು ಹೇಳಿದರು.

Similar News