×
Ad

RTE: ಮೊದಲನೇ ಸುತ್ತಿನಲ್ಲಿ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಯ್ಕೆ

Update: 2023-05-18 20:01 IST

ಬೆಂಗಳೂರು, ಮೇ 18: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ(ಆರ್‍ಟಿಇ) ಅಡಿಯಲ್ಲಿ 5,105 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಿದ್ದು, ಮೇ 29ರೊಳಗಾಗಿ ಶಾಲೆಗಳಲ್ಲಿ ದಾಖಲಾತಿಯನ್ನು ಪಡೆಯುವಂತೆ ತಿಳಿಸಲಾಗಿದೆ.

ಪ್ರಸಕ್ತ ವರ್ಷದ ಆರ್‍ಟಿಐ ಅಡಿಯಲ್ಲಿ ರಾಜ್ಯದಲ್ಲಿರುವ ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಪಡೆಯಲು ಸಲ್ಲಿಸಿದ ಅರ್ಜಿಗಳ ಪೈಕಿ 11,532 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಿದ್ದು, ಗುರುವಾರದಂದು ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ 5,105 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳು ಮೇ 29ರೊಳಗಾಗಿ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ತಿಳಿಸಿದೆ.

ಸೀಟು ಹಂಚಿಕೆ ವಿವರಗಳಿಗೆ ಇಲಾಖಾ ವೆಬ್‍ಸೈಟ್ https://www.schooleducation.kar.nic.in/ಗೆ ಸಂಪರ್ಕಿಸುವಂತೆ ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ. 

Similar News