ಉಪ ಯೋಜನಾ ನಿರ್ದೇಶಕರ ಹುದ್ದೆ: ಅರ್ಜಿ ಆಹ್ವಾನ
Update: 2023-05-18 21:33 IST
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸುತ್ತಿರುವ ಆತ್ಮಯೋಜನೆಯಡಿ ಉಪ ಯೋಜನಾ ನಿರ್ದೇಶಕರು-1 ಹುದ್ದೆಯನ್ನು ನೇರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು, ಕೃಷಿ ಹಾಗೂ ಕೃಷಿಗೆ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.