ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಕುಮಾರಸ್ವಾಮಿ

Update: 2023-05-18 17:19 GMT

ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ, ಕಾದು ನೋಡಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಮಾತನಾಡಿದ ಅವರು, 'ಬಹುಮತದ ಸರಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ' ಎಂದರು.

'ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ' ಎಂದು ಮತದಾರರಿಗೆ ತಿಳಿಸಿದರು. 

Similar News