×
Ad

ಸಿದ್ದರಾಮಯ್ಯ ಸಂಪುಟ ಸೇರ್ತಾರಾ ಜಗದೀಶ್ ಶೆಟ್ಟರ್?: ಮಾಜಿ ಸಿಎಂ ಹೇಳಿದ್ದೇನು?

Update: 2023-05-19 17:10 IST

ಬೆಂಗಳೂರು: ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಹಲವು ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶುಕ್ರವಾರ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, "ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಲು ಬಂದಿದ್ದೆ. ಬೇರೆ ಯಾವುದೇ ಚರ್ಚೆ ಮಾಡಿಲ್ಲ'' ಎಂದು ತಿಳಿಸಿದರು. 

ಸಚಿವ ಸಂಪುಟಕ್ಕೆ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ''ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ, ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ'' ಎಂದು ಸ್ಪಷ್ಟಪಡಿಸಿದರು.

Similar News