×
Ad

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ: ಸಂತ್ರಸ್ತರನ್ನು ಭೇಟಿಯಾದ ಅಂತರ್ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

Update: 2023-05-19 19:53 IST

ಪುತ್ತೂರು: ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ಶುಕ್ರವಾರ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ.

ಆಸ್ಪತ್ರೆಯಲ್ಲಿ  ದಾಖಲಾಗಿರುವ  ಅಭಿ ಯಾನೆ ಅವಿನಾಶ್ ಹಾಗೂ ಗುರುಪ್ರಸಾದ್  ಅವರನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ರೋಹಿತ್ ಕುಮಾರ್ ಕಟೀಲು ಮತ್ತು ಆಯೋಗದದ ಕಾನೂನು ಸಲಹೆಗಾರ ಸುನಿಲ್‌ ಕುಮಾರ್ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ  ಕಾನೂನನ್ನು ಮೀರಿ ಅಮಾನುಷವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದ ಅವರು ಅಮಾಯಕರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಸೂಕ್ತ ರೀತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು. 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವಿನಾಶ್ ಮತ್ತು ಗುರುಪ್ರಸಾದ್ ಅವರಿಗೆ ಆಯೋಗದ ವತಿಯಿಂದ ಇದೇ ಸಂದರ್ಭದಲ್ಲಿ ಧನಸಹಾಯ ಮಾಡಲಾಯಿತು. 

ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ರಾಘವ ದೇವಾಡಿಗ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

Similar News