ಸುಳ್ಯ: ತಂದೆ-ಮಗನ ನಡುವೆ ಹೊಡೆದಾಟ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತ್ಯು

Update: 2023-05-19 15:42 GMT

ಸುಳ್ಯ: ತಂದೆ-ಮಗನ ನಡುವೆ ನಡೆದ ಹೊಡೆದಾಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ಸುಳ್ಯ ಅಮರಮೂಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ನಡೆದಿದೆ.

ಕಿಟ್ಟು (58) ಮೃತಪಟ್ಟ ವ್ಯಕ್ತಿ. ಕಿಟ್ಟು ಅವರ ಮೊದಲನೆ ಹೆಂಡತಿಯ ಪುತ್ರ ಹರ್ಷಿತ್‍ ಎಂಬವನೊಂದಿಗೆ ಹಳೆಯ ದ್ವೇಷವೊಂದಕ್ಕೆ ಜಗಳ ನಡೆದಿದೆ ಎನ್ನಲಾಗಿದೆ. ಹರ್ಷಿತ್ ತನ್ನ ತಂದೆಗೆ ಸಲಾಕೆಯಿಂದ ಹೊಡೆದಿದ್ದಾಗಿ ಆರೋಪಿಸಲಾಗಿದೆ. ಈ ಘಟನೆ ಒಂದು ವಾರದ ಹಿಂದೆ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಕಿಟ್ಟುರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ನಿತ್ಯಾನಂದ ಎಂಬವರು ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Similar News