ವಾರಾಂತ್ಯದಲ್ಲಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು, ಮೇ 19: ಬಿಸಿಲಿನ ಝಳಕ್ಕೆ ಕಂಗೆಟ್ಟಿರುವ ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಹಲವಡೆ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 21 ಮತ್ತು 22ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಬಿದ್ದರೆ, ಇನ್ನು ಕೆಲವು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮೇ 20 ಮತ್ತು 21ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಇಲಾಖೆ ತಿಳಿಸಿದೆ.
ಒಂದು ವಾರದಿಂದ ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಇದರಿಂದ ಮಳೆಯ ವಾತಾವರಣ ಸೃಷ್ಟಿಯಾಗುತ್ತಿದೆ. ಮೇ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಶುಕ್ರವಾರ 35 ಸೆಲ್ಸಿಯಸ್ ದಾಖಲಾಗಿತ್ತು.