×
Ad

ಕಂಬಳ: ಸುಪ್ರೀಂ ಕೋರ್ಟ್ ತೀರ್ಪಿಗೆ ಸ್ವಾಗತ

Update: 2023-05-19 22:08 IST

ಉಡುಪಿ: ಐತಿಹಾಸಿಕ ಜಾನಪದ ಕ್ರೀಡೆ ಕಂಬಳದ ಪರವಾಗಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ನಿನ್ನೆಯ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿದೆ.

ಈ ಹೋರಾಟದಲ್ಲಿ ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿ ಕೂಡಾ ಕೈಜೋಡಿಸಿದ್ದು, ಹಾಗೂ ಇದಕ್ಕೆ ಸಹಕರಿಸಿದ ರಾಜ್ಯ ಸರಕಾರಕ್ಕೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಕಂಬಳ ಸಮಿತಿಗೆ ಎಲ್ಲಾ ಕಂಬಳ ಆಯೋಜಕರಿಗೆ, ಕಂಬಳ ಕೋಣಗಳ ಮಾಲಕರಿಗೆ ಹಾಗೂ ಕಂಬಳದ ಉಳಿವಿಗಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Similar News