×
Ad

ಬಲೂಚಿಸ್ತಾನ: ಜಮಾತೆ ಇಸ್ಲಾಮಿ ಮುಖ್ಯಸ್ಥರ ರ್ಯಾಲಿಯಲ್ಲಿ ಆತ್ಮಹತ್ಯಾ ದಾಳಿ

Update: 2023-05-19 23:17 IST

ಇಸ್ಲಮಾಬಾದ್, ಮೇ 19: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಜಮಾತೆ ಇಸ್ಲಾಮಿ ಮುಖ್ಯಸ್ಥ ಸಿರಾಜುಲ್ ಹಖ್ ಅವರ ವಾಹನಗಳ ಸಾಲಿನ ಮೇಲೆ ಶುಕ್ರವಾರ ಆತ್ಮಹತ್ಯಾ  ಬಾಂಬ್ ದಾಳಿ ನಡೆದಿದ್ದು ಕನಿಷ್ಟ 5 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

ಬಲೂಚಿಸ್ತಾನದ ಝೊಹಬ್‍ನಲ್ಲಿ ರಾಜಕೀಯ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಬೆಂಗಾವಲು ಪಡೆಯೊಂದಿಗೆ ಆಗಮಿಸಿದ್ದ ಸಿರಾಜುಲ್ ಹಖ್‍ರನ್ನು ಜನತೆ ಅಭಿನಂದಿಸುತ್ತಿದ್ದಾಗ ಬಳಿಗೆ ಬಂದ ಓರ್ವ ವ್ಯಕ್ತಿ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಸ್ಫೋಟದಿಂದ ಕನಿಷ್ಟ 5 ಮಂದಿ ಗಾಯಗೊಂಡಿದ್ದಾರೆ. ಆದರೆ ಹಖ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಪಕ್ಷದ ವಕ್ತಾರರು ಹೇಳಿದ್ದಾರೆ. ದಾಳಿ ಮಾಡಿದ ವ್ಯಕ್ತಿ ಸ್ಫೋಟದಲ್ಲಿ ಮೃತಪಟ್ಟಿದ್ದು ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Similar News