ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2023-05-20 12:43 GMT

ಮಂಗಳೂರು, ಮೇ 20: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಮೂಡಿಸುವ ವರದಿಗಾರಿಕೆಗೆ  ನೀಡಲಾಗುವ ‘ಬ್ರ್ಯಾಂಡ್ ಮಂಗಳೂರು’  2022ನೇ ಸಾಲಿನ  ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುದ್ರಣ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು, ದೃಶ್ಯ ಮಾಧ್ಯಮದ ವರದಿಗಾರರು ಅರ್ಜಿ  ಸಲ್ಲಿಸಬಹುದಾಗಿದೆ. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿಗೆ 2022ರ ಜ.1ರಿಂದ ಡಿ.31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು.

ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ದೃಶ್ಯ ಮಾಧ್ಯಮದ  ವರದಿಗಾರರು ಸಿ.ಡಿ ಯೊಂದಿಗೆ ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು 2023 ಜೂನ್ 10 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ: ಪ್ರಧಾನ ಕಾರ್ಯದರ್ಶಿ  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ಉರ್ವ ಮಾರ್ಕೆಟ್  ರಸ್ತೆ, ಮಂಗಳೂರು-6 ಇಲ್ಲಿಗೆ ಕಳುಹಿಸುವಂತೆ ಪ್ರಕಟನೆ  ತಿಳಿಸಿದೆ.

Similar News