ಹೊಸ ಸಂಸತ್ ಕಟ್ಟಡ ಉದ್ಘಾಟನೆ ಮಾಡಬೇಕಿರುವುದು ಪ್ರಧಾನಿಯಲ್ಲ ರಾಷ್ಟ್ರಪತಿ: ರಾಹುಲ್ ಗಾಂಧಿ
Update: 2023-05-21 14:24 IST
ಹೊಸದಿಲ್ಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಹೇಳಿದ್ದಾರೆ.
ಮೇ 28 ರಂದು ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ಗುರುವಾರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಹೊಸ ಕಟ್ಟಡವನ್ನು ಉದ್ಘಾಟಿಸಲು ಆಹ್ವಾನವನ್ನು ನೀಡಿದ್ದರು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.
ಟ್ವಿಟರ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, "ರಾಷ್ಟ್ರಪತಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ" ಎಂದು ಹೇಳಿದ್ದಾರೆ.
ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಜನ್ಮದಿನವಾದ ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆ ಮಾಡಲಾಗುತ್ತಿದ್ದು, ಹಲವಾರು ವಿರೋಧ ಪಕ್ಷಗಳು ಈ ಬಗ್ಗೆ ಸರಕಾರವನ್ನು ಗುರಿಯಾಗಿಸಿಕೊಂಡಿವೆ.