×
Ad

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳ ತನಿಖೆ ಮಾಡುತ್ತೇವೆ: ಎಂ.ಬಿ. ಪಾಟೀಲ್

Update: 2023-05-21 18:20 IST

ಬೆಂಗಳೂರು: ‘ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಅನೇಕ ಹಗರಣಗಳ ಆರೋಪಗಳ ಕುರಿತು ತನಿಖೆ ಮಾಡಲು ಸರಕಾರ ಕ್ರಮ ವಹಿಸಲಿದೆ’ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

‘ಪಿಎಸ್ಸೈ ನೇಮಕಾತಿ, ಶೇ.40ರಷ್ಟು ಕಮಿಷನ್ ಆರೋಪ ಸೇರಿ ಎಲ್ಲ ಹಗರಣಗಳ ಬಗ್ಗೆ ತನಿಖೆ ನಡೆಸಲಾಗಿದೆಯಾದರೂ ಅವು ತೃಪ್ತಿಕರವಾಗಿಲ್ಲ. ಹೀಗಾಗಿ, ನೂತನ ಕಾಂಗ್ರೆಸ್ ಸರಕಾರವು ಆ ಎಲ್ಲ ಹಗರಣಗಳ ಮರು ತನಿಖೆ ಮಾಡುವುದರ ಜೊತೆಗೆ, ತನಿಖೆಯಾಗದೆ ಉಳಿದಿರುವ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

‘ಬಿಜೆಪಿ ಸರಕಾರದಲ್ಲಿ ಆಗಿರುವ ಹಗರಣಗಳ ಬಗ್ಗೆ ತನಿಖೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮಲ್ಲಿ ಮಾತನಾಡಿದ್ದಾರೆ. ಬಿಜೆಪಿ ಸರಕಾರದಲ್ಲಿ ಆಗಿರುವ ಹಗರಣಗಳ ವಿರುದ್ಧವೇ ಕಾಂಗ್ರೆಸ್ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದೆ. ಈಗ ನಾವು ಸುಮ್ಮನಾದರೆ ಜನರು ನಮ್ಮನ್ನು ತಪ್ಪಾಗಿ ಅರ್ಥೈಸುತ್ತಾರೆ’ ಎಂದು ಪಾಟೀಲ್ ಸ್ಪಷ್ಟಪಡಿಸಿದರು.

Similar News