×
Ad

ಅಂಗವಿಕಲರ, ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಾವೇಶ

Update: 2023-05-21 20:45 IST

ಕುಂದಾಪುರ, ಮೇ 21: ಎಲ್ಲಾ ಅಂಗವಿಕಲರಿಗೂ ಶಿಕ್ಷಣ, ಉದ್ಯೋಗ ಕೊಡಬೇಕು. ಅಂಗ ವಿಕಲರಿಗೆ ಅನುಕಂಪ ಬೇಡ ಅವಕಾಶ ಬೇಕು ಎಂದು ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ ನವದೆಹಲಿ (ಎನ್‌ಪಿಆರ್‌ಡಿ) ಕಾರ್ಯಾಧ್ಯಕ್ಷ ನಂಬುರಾಜ ಹೇಳಿದ್ದಾರೆ.

ಕುಂದಾಪುರದಲ್ಲಿ ರವಿವಾರ ನಡೆದ ಕನಾಟಕ ರಾಜ್ಯ ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷ ಮಂಜುನಾಥ ಹೆಬ್ಬಾರ್ ಕಾಲ್ತೋಡು ವಹಿಸಿದ್ದರು. ಜುಲೈ 2 ಮತ್ತು 3ರಂದು ಮಂಡ್ಯದಲ್ಲಿ ಜರಗುವ ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ರಾಜ್ಯ ಸಮ್ಮೇಳನ ಹಾಗೂ ಸದಸ್ಯತ್ವ ನೋಂದಣಿ ಅಂದೋಲನ ಯಶಸ್ವಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ತಲ್ಲೂರು ಚಟುವಟಿಕೆಯ ವರದಿ ಮಂಡಿಸಿದರು. ಕೋಶಾಧಿಕಾರಿ ದೇವರಾಜ್ ಹಾಲಾಡಿ ಲೆಕ್ಕಪತ್ರ ಮಂಡಿಸಿದರು. ಒಕ್ಕೂಟದ ರಾಜ್ಯ ಕಾರ್ಯದರ್ಶಿ ಅರ್ಪುದ ರಾಜನ್ ಮಾತನಾಡಿದರು.

ಗೌರವ ಅಧ್ಯಕ್ಷ ವೆಂಕಟೇಶ ಕೋಣಿ ಪ್ರಸ್ತಾವಿಕವಾಗಿ ಮಾತನಾಡಿದರು. ರಾಜು ಜಡ್ಕಲ್ ಸ್ವಾಗತಿಸಿದರು. ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್‌ಡಬ್ಲ್ಯು) ಸಭೆಯಲ್ಲಿ ಭಾಗವಹಿಸಿದ್ದರು.

Similar News