ಮತದಾರರಿಗೆ ಕೊಟ್ಟ ವಚನಕ್ಕೆ ಬದ್ದ: ಗುರ್ಮೆ ಸುರೇಶ್ ಶೆಟ್ಟಿ

Update: 2023-05-21 15:18 GMT

ಕಾಪು, ಮೇ 21: ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ನಡೆದ ರೋಡ್ ಶೋ ಮತ್ತು ಕಳತ್ತೂರಿನಲ್ಲಿ ನಡೆದ ಮೊದಲನೇ ದಿನದ ವಿಜಯೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಗುರ್ಮೆ, ಮುಂದಿನ ಐದು ವರ್ಷಗಳಲ್ಲಿ ತಮ್ಮನ್ನು ಚುನಾಯಿಸಿದ ಮತದಾರರಿಗೆ ತಾವು ಕಾಯಾ ವಾಚಾ ಮನಸಾ ಸೇವೆ ಸಲ್ಲಿಸುತ್ತೇನೆ. ನಾನು ನೀಡಿದ ವಚನಕ್ಕೆ ಬದ್ದನಾಗಿರು ತ್ತೇನೆ. ತಾನು ಕ್ಷೇತ್ರದ ಮತದಾರರಿಗೆ ಚಿರ ಋಣಿಯಾಗಿರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಶಿಲ್ಪಾ ಜಿ.ಸುವರ್ಣ, ಗಂಗಾಧರ್ ಸುವರ್ಣ, ಲತಾ ಆಚಾರ್ಯ, ಸುಮಾ ಶೆಟ್ಟಿ, ಸುರೇಂದ್ರ ಪನಿಯೂರು, ಗೋಪಾಲಕೃಷ್ಣ ರಾವ್, ಸಚಿನ್ ಸುವರ್ಣ ಪಿತ್ರೋಡಿ, ಸಂತೋಷ ಮೂಡುಬೆಳ್ಳೆ ಮೊದಲಾದವರು  ಉಪಸ್ಥಿತರಿದ್ದರು.

Similar News