×
Ad

ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ ಉಡುಪಿ ಜಿಲ್ಲೆಗೆ ದೊಡ್ಡ ನಷ್ಟ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಂತಾಪ

Update: 2023-05-21 22:31 IST

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಜಕಾರಣಿ, ಉಡುಪಿಯ ಮಾಜಿ ಶಾಸಕರಾದ ಯು.ಆರ್ ಸಭಾಪತಿ ನಿಧನ ಉಡುಪಿ ಜಿಲ್ಲೆಗೆ ದೊಡ್ಡ ನಷ್ಟ ಎಂದು ಹೇಳಿರುವ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತನ್ನ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಜಿಲ್ಲೆಯ ಸೌಹಾರ್ದದ ಪರಂಪರೆಯ ಪ್ರಬಲ ಪ್ರತಿಪಾದಕರಾಗಿದ್ದ ಅವರು ಸೌಹಾರ್ದಯುತ ಮತ್ತು ಜಾತ್ಯಾತೀತ ಸಮಾಜ ನಿರ್ಮಾಣದ ಮೂಲಕ ಮಾತ್ರ ಅಭಿವೃದ್ಧಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯ ಎಂಬುದು ಅವರ ನಿಲುವಾಗಿತ್ತು.

ತನ್ನ ಯೌವನದಲ್ಲೇ ರಾಜಕೀಯದತ್ತ ಆಕರ್ಷಿತರಾಗಿದ್ದ ಅವರು ಅವಿಭಜಿತ ಜಿಲ್ಲೆಯ ಯುವ ಕಾಂಗ್ರೆಸ್ ಸೇರಿದಂತೆ ಕಾಂಗ್ರೆಸ್'ನ ವಿವಿಧ ಪ್ರಮುಖ ಹುದ್ದೆಗಳ ಜವಾಬ್ದಾರಿಯನ್ನು ನಿರ್ವಹಿಸಿ ಯುವಕರನ್ನು ಧನಾತ್ಮಕ ರಾಜಕೀಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಿದರು. ದಕ್ಷಿಣಕನ್ನಡ ಜಿಲ್ಲಾ ಪರಿಷತ್ ಸದಸ್ಯರಾಗಿ, ಶಿಕ್ಷಣ ಸ್ಥಾಯಿ ಸಮಿತಿಯ ಸದಸ್ಯರಾಗಿ, ಮೀನುಗಾರರ ಸಂಘಟನೆಯ ನಾಯಕರಾಗಿ ಸೇವೆ ಸಲ್ಲಿಸಿದ ಅವರ ನಿರ್ಗಮನ ದುಃಖಕರ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಯಾಸೀನ್ ಮಲ್ಪೆ  ಹೇಳಿಕೆ ನೀಡಿದ್ದಾರೆ.

Similar News