ತುಮಕೂರು | ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ; ಪ್ರಕರಣ ದಾಖಲು

Update: 2023-05-22 08:39 GMT

ತುಮಕೂರು : ಒಂದೇ ಗ್ರಾಮದ 4 ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ವರದಿಯಾಗಿದೆ.

ಗ್ರಾಮದ ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ನಾಪತ್ತೆಯಾಗಿದ್ದು, ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರಿಂದ ಗ್ರಾಮದಲ್ಲಿ ಆತಂಕ ಆವರಿಸಿದೆ.  

ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದ ಮಕ್ಕಳು ಮನೆಗೆ ಬಂದಿಲ್ಲ ಎಂದು ಗಾಬರಿಗೊಂಡು ಊರೆಲ್ಲಾ ಹುಡುಕಾಡಿದ ಪೋಷಕರು ಕೊನೆಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ನಾಪತ್ತೆಯಾಗಿರುವ ನಾಲ್ಕು ಮಕ್ಕಳೂ 15 ವರ್ಷದ ವಯಸ್ಸಿನವರಾಗಿದ್ದು, ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ. ಸದ್ಯ ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಶಿರಾ ಶಾಸಕ ಟಿ ಬಿ ಜಯಚಂದ್ರ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಕ್ಕಳ ಚಿತ್ರಗಳನ್ನು ಫೋಸ್ಟ್ ಮಾಡಿ, ‘ಘಟನೆ ಸಂಬಂಧ ನಾನು ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕರ ಸಹಕಾರ ಕೂಡ ನಿರೀಕ್ಷಿಸುತ್ತಿದ್ದೇನೆ’ ಎಂದು ಮನವಿ ಮಾಡಿದ್ದಾರೆ. 

Full View

Similar News