×
Ad

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್

Update: 2023-05-22 19:25 IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿದರು. 

ಉಪ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ ಭರತ್ ರೆಡ್ಡಿ ಜತೆಗಿದ್ದರು.

Similar News