×
Ad

ಯಕ್ಷ ಸಂಘಟಕ ಎಸ್.ಎನ್.ಪಂಜಾಜೆ ನಿಧನ

Update: 2023-05-22 19:28 IST

ಉಡುಪಿ: ಯಕ್ಷಗಾನ ಸೇರಿದಂತೆ ವಿವಿಧ ಕಲೆಗಳ ಸಂಘಟಕ ಎಸ್.ಎನ್.ಪಂಜಾಜೆ ಎಂದೇ ಖ್ಯಾತರಾದ ಪಂಜಾಜೆ ಸೂರ್ಯನಾರಾಯಣ ಭಟ್ (71) ಇಂದು ನಿಧನ ಹೊಂದಿದರು.

ಬೆಂಗಳೂರಿನಲ್ಲಿ ತಾವೇ ಸ್ಥಾಪಿಸಿದ ಕರ್ನಾಟಕ ಸಾಂಸ್ಕತಿಕ ಕಲಾ ಪ್ರತಿಷ್ಠಾನ ಬೆಂಗಳೂರು ಮೂಲಕ 15 ಯಕ್ಷಗಾನ ಸಾಹಿತ್ಯ ಸಮ್ಮೇಳನ ಸಂಘಟಿಸಿದ್ದ ಇವರು, ರಾಜಧಾನಿಯಲ್ಲಿದ್ದು ಯಕ್ಷಗಾನದ ಕಲಿಕೆ, ಪ್ರಸಾರ, ಪ್ರದರ್ಶನ ಮತ್ತು ಚಿಂತನೆಗೆ ಸಂಬಂಧಿಸಿ ಪಂಜಾಜೆ ಮಾಡಿದ ಕೆಲಸ ದಾಖಲಾರ್ಹ ವಾದುದು. ಕರ್ನಾಟಕದಲ್ಲಿ ಯಕ್ಷಗಾನ ಪ್ರದೇಶಗಳಲ್ಲದೆ, ಅನ್ಯ ಜಿಲ್ಲೆಗಳಲ್ಲಿ, ಮುಂಬೈಯಲ್ಲಿ ಸಮ್ಮೇಳನವನ್ನು ಶಿಷ್ಟವಾಗಿ ನಡೆಸಿದ ಖ್ಯಾತಿ ಇವರಿಗಿದೆ.

ಪ್ರತೀ ಸಮ್ಮೇಳನದಲ್ಲೂ ಯಕ್ಷಗಾನ ಹಿರಿಯ ಸಾಧಕರಿಗೆ ಸಮ್ಮೇಳನಾಧ್ಯಕ್ಷ ಪಟ್ಟ ನೀಡಿ, ಹಲವರನ್ನು ಹಿರಿಯ ಕಲಾವಿದರನ್ನು ಗೌರವಿಸುತಿದ್ದರು. ಹತ್ತು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಯಕ್ಷಗಾನ ಸಮ್ಮೇಳನದಲ್ಲಿ ಯಕ್ಷಗಾನ ಕಲಾರಂಗ ಸಂಸ್ಥೆಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು.

ಈ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಕರ್ನಾಟಕ ಯಕ್ಷಗಾನ ಸಮ್ಮೇಳನದಲ್ಲಿ ಅವರನ್ನು ಸಮ್ಮೇಳನದ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರು ಪತ್ನಿ, ಪುತ್ರ ಮತ್ತು ಅಸಂಖ್ಯಾತ ಯಕ್ಷಗಾನ ಪ್ರೇಮಿಗಳನ್ನು ಅಗಲಿದ್ದಾರೆ.

ಪಂಜಾಜೆ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Similar News