ಅಕಾಡೆಮಿ, ರಂಗಾಯಣ, ಪ್ರಾಧಿಕಾರಗಳ ನಾಮ ನಿರ್ದೇಶನ ರದ್ದು

Update: 2023-05-22 14:03 GMT

ಬೆಂಗಳೂರು, ಮೇ 22: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಅಕಾಡೆಮಿ, ರಂಗಾಯಣ, ಪ್ರಾಧಿಕಾರಗಳ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನಾಮ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಕಾಡೆಮಿಗಳು: ರಾಜ್ಯ ಸಾಹಿತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ಸಂಗೀತ-ನೃತ್ಯ ಅಕಾಡೆಮಿ, ಶಿಲ್ಪಕಲಾ ಅಕಾಡೆಮಿ, ಲಲಿತಾ ಕಲಾ ಅಕಾಡೆಮಿ, ನಾಟಕ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ,.ಕೊಡವ ಸಾಹಿತ್ಯ ಅಕಾಡೆಮಿ, ಅರೆ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಬಯಲಾಟ ಅಕಾಡೆಮಿ ಮತ್ತು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ.

ರಂಗಾಯಣಗಳು: ಮೈಸೂರು ರಂಗಾಯಣ, ಶಿವಮೊಗ್ಗ ರಂಗಾಯಣ, ಧಾರವಾಡ ರಂಗಾಯಣ, ಕಲಬುರಗಿ ರಂಗಾಯಣ, ವೃತ್ತಿ ರಂಗಭೂಮಿ ರಂಗಾಯಣ(ದಾವಣಗೆರೆ), ಯಕ್ಷರಂಗಾಯಣ(ಕಾರ್ಕಳ, ಉಡುಪಿ).

ಪ್ರಾಧಿಕಾರಗಳು: ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ನಾಮ ನಿರ್ದೇಶನಗಳನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಜಂಟಿ ಕಾರ್ಯದರ್ಶಿ ಎನ್.ಶಾರದಾಂಬ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Similar News