×
Ad

ನಟ ಶಿವರಾಜ್ ​ಕುಮಾರ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ

Update: 2023-05-23 10:20 IST

ಬೆಂಗಳೂರು: ನಗರದ ನಾಗವಾರದಲ್ಲಿರುವ ನಟ ಶಿವರಾಜ್​ಕುಮಾರ್ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಭೇಟಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುರ್ಜೇವಾಲಾ, ಇಂದು ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ. ಅವರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಕೊಟ್ಟಿತು. ಗೀತಾ ಶಿವರಾಜಕುಮಾರ್ ಅವರು ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ಇತ್ತೀಚೆಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. ಹಾಗಾಗಿ, ಅವರಿಗೆ ಧನ್ಯವಾದ ಅರ್ಪಿಸಲು ನಾನು ಅವರ ನಿವಾಸಕ್ಕೆ ಹೋಗಿದ್ದಾಗಿ ಹೇಳಿದ್ದಾರೆ.

Similar News