×
Ad

ಮಹಾರಾಷ್ಟ್ರ: ಕಾರು-ಟ್ರಕ್ ಢಿಕ್ಕಿ, ಕನಿಷ್ಟ ಐವರು ಮೃತ್ಯು, 7 ಮಂದಿಗೆ ಗಾಯ

Update: 2023-05-23 11:44 IST

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ)ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಹಾಗೂ  ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ಮುಂಬೈನಿಂದ ಸುಮಾರು 650 ಕಿಮೀ ದೂರದಲ್ಲಿರುವ ಅಮರಾವತಿಯ ಖಲ್ಲಾರ್ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಯಾಪುರ-ಅಂಜಂಗಾವ್ ರಸ್ತೆಯಲ್ಲಿ ಸೋಮವಾರ ರಾತ್ರಿ 11 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ಬಲಿಯಾದವರಲ್ಲಿ ಹೆಚ್ಚಿನವರು ಒಂದೇ ಕುಟುಂಬದವರು.  ಅವರು ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ದರ್ಯಾಪುರಕ್ಕೆ ಹಿಂತಿರುಗುತ್ತಿದ್ದರು. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದರಿಯಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News