ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಲು ಮರದ ತಿಮ್ಮಕ್ಕ ಶುಭ ಹಾರೈಕೆ
Update: 2023-05-23 13:00 IST
ಬೆಂಗಳೂರು, ಮೇ 23: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.
ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಶುಭ ಹಾರೈಸಿದರು.
ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದರು.
ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ, ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.
— CM of Karnataka (@CMofKarnataka) May 23, 2023
ಈ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ತಿಮ್ಮಕ್ಕನವರಿಗೆ… pic.twitter.com/ktAl1qIJtz