ಎಂ.ಬಿ ಪಾಟೀಲ್ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

Update: 2023-05-23 09:02 GMT

ಬೆಂಗಳೂರು: 'ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ' ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರಲ್ಲ ಎಂದು ಮಾಧ್ಯಮದವರು ವಿಧಾನಸೌಧದ ಬಳಿ ಮಾಧ್ಯಮದವರು ಗಮನ ಸೆಳೆದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು.

''ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ'' ಎಂದು ಸ್ಪಷ್ಟಪಡಿಸಿದರು. 

Similar News