ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಶಿಬಿರ

Update: 2023-05-23 15:33 GMT

ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ವತಿಯಿಂದ SSLC ಮತ್ತು PUC ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ಗಡಿಯಾರದ ಮದ್ರಸ ಸಭಾಂಗಣದಲ್ಲಿ ನಡೆಯಿತು.

ಇನ್ಫೋಮೇಟ್ ರಿ. ನಿರ್ದೇಶಕರಾದ ಅಬ್ದುಲ್ ಖಾದರ್, ವೃತ್ತಿ ಮಾರ್ಗದರ್ಶಕರಾದ ಫಯಾಝ್ ಎ ಎಂ, ತೌಸಿಮ್ ಅಹ್ಮದ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಗಡಿಯಾರ ಮೊಹಿಯುದ್ದೀನ್ ಜುಮಾ ಮಸೀದಿ ಖತೀಬ್ ಉಮ್ಮರ್ ಫೈಝಿ ದುವಾ ನೆರವೇರಿಸಿದರು.‌ ರಿಯಾಝ್ ಕಲ್ಲಾಜೆ ಪ್ರಸ್ತಾವನೆಗೈದರು. ಮುಸ್ಲಿಂ ಸೆಂಟ್ರಲ್ ಕಮಿಟಿ ಸದಸ್ಯರಾದ ಹನೀಫ್ ಖಾನ್ ಕೊಡಾಜೆ, ಯುವ ಪತ್ರಕರ್ತ ಆಝಾದ್ ಖಂಡಿಗ ಉಪಸ್ಥಿತರಿದ್ದರು.

ಸೋಶಿಯಲ್ ಇಖ್ವಾ ಫೆಡರೇಶನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸುಲ್ತಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಝೈನುಲ್ ಅಕ್ಬರ್ ಕಡೇಶ್ವಾಲ್ಯ ಕಾರ್ಯಕ್ರಮ ನಿರ್ವಹಿಸಿದರು.

Similar News