ಮತ್ತೆ ಪಠ್ಯಪುಸ್ತಕ ಪರಿಷ್ಕರಣೆ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
Update: 2023-05-23 21:33 IST
ಬೆಂಗಳೂರು: ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಪಠ್ಯಪುಸ್ತಕಗಳ ಪರಿಷ್ಕರಣೆಯ ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’' ಎಂದು ತಿಳಿಸಿದರು.
ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗೆ ಚಿಂತಕರು, ಬುದ್ಧಿಜೀವಿಗಳು ಹಾಗೂ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.