×
Ad

ಉಡುಪಿ: ಮಗಳ ಮದುವೆಗೆ ಬಂದಿದ್ದ ತಂದೆ ಹೊಟೇಲಿನಲ್ಲಿ ಬಿದ್ದು ಮೃತ್ಯು

Update: 2023-05-23 21:44 IST

ಉಡುಪಿ, ಮೇ 23: ಮಗಳ ಮದುವೆ ಕಾರ್ಯಕ್ಕೆಂದು ಮುಂಬೈಯಿಂದ ಬಂದು ಹೊಟೇಲಿನಲ್ಲಿ ಉಳಿದುಕೊಂಡಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ಮೇ 21ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ(68) ಎಂದು ಗುರುತಿಸಲಾಗಿದೆ. ಇವರ ಎರಡನೇ ಮಗಳಿಗೆ ಮೇ22ಕ್ಕೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಹಿನ್ನೆಲೆಯಲ್ಲಿ ಇವರೆಲ್ಲರು ಮೇ 19ರಂದು ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೇಲೊಂದರಲ್ಲಿ ಉಳಿದುಕೊಂಡಿದ್ದರು.

ಇವರು ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದರು. ಇದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News