ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಹಿಂದೂ ಮಹಾಸಭಾ ಟ್ವಿಟರ್ ಖಾತೆ ವಿರುದ್ಧ ದೂರು

Update: 2023-05-23 17:44 GMT

ಬೆಂಗಳೂರು, ಮೇ 23: ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಡಿಯೋ ತುಣುಕನ್ನು ಬಳಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಟ್ವೀಟ್ ಮಾಡಿರುವ ಹಿಂದೂ ಮಹಾಸಭಾದ ಟ್ವಿಟರ್ ಖಾತೆ ವಿರುದ್ಧ ಕೆಪಿಸಿಸಿ ವಕ್ತಾರ ಎಲ್. ಸೂರ್ಯ ಮುಕುಂದರಾಜ್‌ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ.

ಮೇ 19 ರಂದು ಹಿಂದೂ ಮಹಾಸಭಾ ತನ್ನ ಟ್ವಿಟರ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ತುಣುಕನ್ನು ಹಾಕಿ "ಮುಖ್ಯಮಂತ್ರಿ ಸಿದ್ಧರಾಮಯ್ಯ, ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಚಿಸಿರುವ ಇಸ್ಲಾಮಿಕ್ ಸರಕಾರದಲ್ಲಿ, ಮುಂದಿನ 5 ವರ್ಷಗಳಲ್ಲಿ ಜಿಹಾದ್ ಮತ್ತು ಮತಾಂತರ ಉತ್ತುಂಗಕ್ಕೇರಲಿದೆ ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳ ಮೇಲಿನ ದಾಳಿಗಳು, ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳು ಹೆಚ್ಚಾಗುತ್ತವೆ" ಎಂದು ಬರೆಯಲಾಗಿದೆ.

ಈ ಪೋಸ್ಟ್ ಕುರಿತಾಗಿ ಪೊಲೀಸರು ಕ್ರಮ ಜರುಗಿಸಬೇಕೆಂದು ಸೂರ್ಯ ಮುಕುಂದರಾಜ್ ತನ್ನ ದೂರಿನಲ್ಲಿ ಮನವಿ ಮಾಡಿದ್ದಾರೆ.

Similar News